ಯೆಶಾಯ 7:17 - ಕನ್ನಡ ಸತ್ಯವೇದವು J.V. (BSI)17 ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.” ಅಧ್ಯಾಯವನ್ನು ನೋಡಿ |