ಯೆಶಾಯ 7:20 - ಕನ್ನಡ ಸತ್ಯವೇದವು J.V. (BSI)20 ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು. ಅಧ್ಯಾಯವನ್ನು ನೋಡಿ |