Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:22 - ಕನ್ನಡ ಸತ್ಯವೇದವು J.V. (BSI)

22 ಅವು ಕರೆಯುವ ಹೆಚ್ಚು ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರುಜೇನುಗಳನ್ನೇ ಉಂಡು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:22
7 ತಿಳಿವುಗಳ ಹೋಲಿಕೆ  

ಅವನು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನತುಪ್ಪವನ್ನೂ ತಿನ್ನುವನು.


ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.


ಬೆಣ್ಣೆ ಕುರಿ ಹಸುವಿನ ಗಿಣ್ಣು ಇವುಗಳನ್ನೂ ತಂದು ಕೊಟ್ಟರು. ಜನರು ಅರಣ್ಯಪ್ರಯಾಣದಿಂದ ಹಸಿದವರೂ ದಣಿದವರೂ ಬಾಯಾರಿದವರೂ ಆಗಿದ್ದಾರೆ ಅಂದುಕೊಂಡು ಇವುಗಳನ್ನು ತಂದರು.


ತರುವಾಯ ಅಬ್ರಹಾಮನು ಹಾಲುಮೊಸರನ್ನೂ ಅಟ್ಟ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡುವವರೆಗೂ ಅವನು ಹತ್ತಿರ ನಿಂತುಕೊಂಡು ಉಪಚಾರ ಮಾಡಿದನು.


ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗವಾಗುವರು, ಬೋನಿಗೆ ಸಿಕ್ಕಿ ವಶವಾಗುವರು.


[ನನ್ನ ಜನರಲ್ಲಿ] ಬಡತನದ ಹಿರಿಯ ಮಕ್ಕಳಿಗೂ ಪೋಷಣೆಯಾಗುವದು, ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು; ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕೊಲ್ಲುವದು.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ ಮಂದೆಗಳಿಗೆ ಆಸರೆಯಾಗುವವು; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು