Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:23 - ಕನ್ನಡ ಸತ್ಯವೇದವು J.V. (BSI)

23 ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:23
13 ತಿಳಿವುಗಳ ಹೋಲಿಕೆ  

ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ನಾನು ನೋಡಲಾಗಿ ಫಲವತ್ತಾದ ಭೂವಿುಯು ಕಾಡಾಗಿತ್ತು. ಅಕಟಾ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದು ಹೋಗಿದ್ದವು.


ಏಕಂದರೆ ಹತ್ತು ಎಕರೆ ಬಾಗಾಯಿತು ಭೂವಿುಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನೀಯುವದು, ಬಿತ್ತಿದ ಒಂದು ಕಂಡುಗ ಬೀಜದಿಂದ ಇಕ್ಕಳ ದವಸವು ಬರುವದು.


ದೇಶವೆಲ್ಲಾ ಮುಳ್ಳುಪೊದೆಯಾಗಿರುವದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.


ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.


ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು