ಯೆಶಾಯ 7:3 - ಕನ್ನಡ ಸತ್ಯವೇದವು J.V. (BSI)3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು - ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲಿವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು : ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು. ಅಧ್ಯಾಯವನ್ನು ನೋಡಿ |