ಯೆಶಾಯ 7:4 - ಕನ್ನಡ ಸತ್ಯವೇದವು J.V. (BSI)4 ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಅಧ್ಯಾಯವನ್ನು ನೋಡಿ |