Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:6 - ಕನ್ನಡ ಸತ್ಯವೇದವು J.V. (BSI)

6 ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ ಒಳಗೆ ನುಗ್ಗಿಕೊಂಡು ಹೋಗಿ ಅದರಲ್ಲಿ ಟಾಬೇಲನ ಮಗನಿಗೆ ಪಟ್ಟಕಟ್ಟೋಣವೆಂದುಕೊಂಡದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:6
12 ತಿಳಿವುಗಳ ಹೋಲಿಕೆ  

ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಪೆಕಹ ಎಂಬವರು ಯೆರೂಸಲೇವಿುನ ಮೇಲೆ ದಂಡೆತ್ತಿ ಬಂದರು. (ಅದನ್ನು ಜಯಿಸುವದಕ್ಕೆ ಆಗಲಿಲ್ಲ.)


ಅರಾಮ್ಯರೂ ಎಫ್ರಾಯೀಮ್ಯರೂ ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆಮಾಡಿ


ಕರ್ತನಾದ ಯೆಹೋವನು ಹೇಳುವದೇನಂದರೆ - ಇದು ನೆರವೇರದು, ಆಗುವದೇ ಇಲ್ಲ.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.


ಈಗ ನೀವು ದೊಡ್ಡ ಗುಂಪಾಗಿರುವದರಿಂದಲೂ ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿರುವದರಿಂದಲೂ ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರೋಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?


ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.


ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವದಿಲ್ಲ.


ಅವರು ನಿನ್ನ ಪ್ರಜೆಗಳಿಗೆ ವಿರೋಧವಾಗಿ ಒಳಸಂಚು ಮಾಡಿ ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ -


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ಉಪೇಕ್ಷಿಸಿ ರೆಚೀನನನ್ನೂ ರೆಮಲ್ಯನ ಮಗನನ್ನೂ ನಂಬಿ ಮೆರೆದದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು