ಯೆಶಾಯ 7:8 - ಕನ್ನಡ ಸತ್ಯವೇದವು J.V. (BSI)8 ಅರಾವಿುಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನನಷ್ಟೆ; ಎಫ್ರಾಯೀವಿುಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನೇ ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು. ಅಧ್ಯಾಯವನ್ನು ನೋಡಿ |