Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜನರು ಅನುಸರಿಸುವ ಮಾರ್ಗದಲ್ಲಿ ನಾನು ನಡೆಯಬಾರದೆಂದು ಸರ್ವೇಶ್ವರ ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಎಚ್ಚರಿಕೆ ಇತ್ತರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ಮಹಾಶಕ್ತಿಯಿಂದ ನನ್ನೊಡನೆ ಮಾತನಾಡಿದನು. ನಾನು ಇತರರಂತೆ ಇರಬಾರದೆಂದು ಯೆಹೋವನು ನನ್ನನ್ನು ಎಚ್ಚರಿಸಿದನು. ಆತನು ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ಯೆಹೋವ ದೇವರು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:11
10 ತಿಳಿವುಗಳ ಹೋಲಿಕೆ  

ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು