ಯೆಶಾಯ 8:12 - ಕನ್ನಡ ಸತ್ಯವೇದವು J.V. (BSI)12 ಇವರು ಯಾವದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ. ಅಧ್ಯಾಯವನ್ನು ನೋಡಿ |