Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:14 - ಕನ್ನಡ ಸತ್ಯವೇದವು J.V. (BSI)

14 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಯೆರೂಸಲೇವಿುನ ನಿವಾಸಿಗಳಿಗೆ ಬಲೆಯೂ ಬೋನೂ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು. ಆದರೆ ನೀನು ಆತನನ್ನು ಸನ್ಮಾನಿಸದೆ ಹೋದರೆ ಆತನು ನಿನಗೆ ಮುಗ್ಗರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:14
24 ತಿಳಿವುಗಳ ಹೋಲಿಕೆ  

ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಆದಕಾರಣ ನೀನು ಹೀಗೆ ಸಾರು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ದೂರವಾಗಿ ತೊಲಗಿಸಿ ಜನಾಂಗಗಳಲ್ಲಿ ಅನ್ಯದೇಶಗಳೊಳಗೆ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಅವರ ಊಟವೇ ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.


ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ಆದರೆ ಯೇಸು ಅವರಿಗೆ - ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಮಾತ್ರ ಮರ್ಯಾದೆಯಿಲ್ಲ ಅಂದನು.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಆತನಿಗೆ ಆಲೋಚನಾ ಕರ್ತನು ಯಾರು? ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?


ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು.


ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ಆದಕಾರಣ ಇಗೋ, ನಾನು ಈ ಜನರ ಮುಂದೆ ಆಟಂಕಗಳನ್ನು ಒಡ್ಡುವೆನು; ತಂದೆಗಳೂ ಮಕ್ಕಳೂ ಅವುಗಳನ್ನು ಎಡವುವರು, ನೆರೆಹೊರೆಯವರೂ ನಾಶವಾಗುವರು. ಇದೇ ಯೆಹೋವನಾದ ನನ್ನ ನುಡಿ.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು