Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:18 - ಕನ್ನಡ ಸತ್ಯವೇದವು J.V. (BSI)

18 ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:18
27 ತಿಳಿವುಗಳ ಹೋಲಿಕೆ  

ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ಅನೇಕರು ನನ್ನ ದುಃಸ್ಥಿತಿಗೆ ಬೆರಗಾಗುತ್ತಾರೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಇಸ್ರಾಯೇಲ್ ದೇವರಾದ ಯೆಹೋವನು ತನ್ನ ಪ್ರಜೆಗೆ ವಿಶ್ರಾಂತಿಯನ್ನು ಅನುಗ್ರಹಿಸಿ ಸದಾಕಾಲವೂ ಯೆರೂಸಲೇವಿುನಲ್ಲಿ ವಾಸಿಸುವವನಾದದರಿಂದ


ಕೆಲವು ಸಾರಿ ನೀವು ನಿಂದೆಗಳನ್ನೂ ಸಂಕಟಗಳನ್ನೂ ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಸೇರಿದವರಾಗಿದ್ದು ಕಷ್ಟಾನುಭವಿಗಳಾದಿರಿ.


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು - ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲಿವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು


ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅನಂತರ ನಾನು ನನ್ನ ಹೆಂಡತಿಯನ್ನು ಕೂಡಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ - ಅದಕ್ಕೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು.


ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು.


ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.


ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ


ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನೆಂಬದಕ್ಕೆ ಒಂದು ಗುರುತು ಕಾಣುವದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನುಂಟುಮಾಡುವವು ಎಂಬದಾಗಿ ಅದರಿಂದಲೇ ನಿಮಗೆ ತಿಳಿದುಬರುವದು;


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.


ಅವರ ಕಣ್ಣ ಮುಂದೆ ಅದನ್ನು ಹೆಗಲ ಮೇಲೆ ಹಾಕಿ ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು