Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:19 - ಕನ್ನಡ ಸತ್ಯವೇದವು J.V. (BSI)

19 ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:19
28 ತಿಳಿವುಗಳ ಹೋಲಿಕೆ  

ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.


ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಅವರು ತಮ್ಮನ್ನು ಬಾಳ್‍ಪೆಗೋರನ ಸೇವೆಗೆ ಒಪ್ಪಿಸಿ ಜಡಮೂರ್ತಿಗಳಿಗೆ ಅರ್ಪಿಸಿದ್ದನ್ನು ಊಟಮಾಡಿದರು.


ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ನೀನು ಕುಗ್ಗಿ ಭೂವಿುಯೊಳಗಿಂದ ಮಾತಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣಸ್ವರವಾಗಿ ಹೊರಡುವದು. ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವದು, ನಿನ್ನ ನುಡಿಯು ದೂಳಿನೊಳಗಿಂದ ಲೊಚಗುಟ್ಟುವದು.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ಆಗ ಸೌಲನು ವಸ್ತ್ರಾದಿಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆ ಸೇರಿ - ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು; ನಾನು ಯಾವನ ಹೆಸರನ್ನು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು ಎಂದು ಆಕೆಯನ್ನು ಬೇಡಿಕೊಂಡನು.


ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ - ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ವೆಬೂಬನನ್ನು ವಿಚಾರಿಸುವದಕ್ಕೆ ಹೋಗುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ?


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ಆಗ ಸಮುವೇಲನು - ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವದೇಕೆ?


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಬತ್ತಿಹೋಗಿದ್ದ ತೆನೆಗಳು ಆ ಏಳು ಒಳ್ಳೇ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ಬಿಚ್ಚಿಹೇಳುವದಕ್ಕೆ ಅವರಲ್ಲಿ ಯಾರಿಂದಲೂ ಆಗಲಿಲ್ಲ.


ನೀನು ಆ ಒಡೆಯರ ಮೇಲೆ ಕೈಮಾಡಿ ನಿರ್ಮೂಲಪಡಿಸಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದೀ; ಸತ್ತವರು ಪುನಃ ಬದುಕುವದಿಲ್ಲ, ಪ್ರೇತಗಳು ಎದ್ದು ಬರುವದಿಲ್ಲವಲ್ಲಾ.


ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


[ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ಎದ್ದು ನಿಲ್ಲು, ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ಲೆಕ್ಕವಿಲ್ಲದ ನಿನ್ನ ಮಾಟಗಳನ್ನೂ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು, ಒಂದು ವೇಳೆ [ನಿನ್ನ ಶತ್ರುವಿನಲ್ಲಿ] ಭಯಹುಟ್ಟೀತು.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;


ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು, ನಿನ್ನಲ್ಲಿ ಕಣಿಯವರು ಇನ್ನಿರರು;


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು