ಯೆಶಾಯ 8:21 - ಕನ್ನಡ ಸತ್ಯವೇದವು J.V. (BSI)21 ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. ಅಧ್ಯಾಯವನ್ನು ನೋಡಿ |