ಯೆಶಾಯ 8:3 - ಕನ್ನಡ ಸತ್ಯವೇದವು J.V. (BSI)3 ಅನಂತರ ನಾನು ನನ್ನ ಹೆಂಡತಿಯನ್ನು ಕೂಡಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ - ಅದಕ್ಕೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಮೇಲೆ ನಾನು ಒಬ್ಬ ಪ್ರವಾದಿನಿಯ ಬಳಿಗೆ ಹೋದೆನು. ಆಕೆಯನ್ನು ಕೂಡಲು, ಆಕೆ ಗರ್ಭವತಿಯಾಗಿ ಒಬ್ಬ ಮಗನನ್ನು ಹಡೆದಳು. ಆಗ ಯೆಹೋವನು ನನಗೆ, “‘ಆ ಮಗನಿಗೆ ಮಹೇರ್ ಶಾಲಾಲ್ ಹಾಷ್ ಬಜ್’ ಎಂಬ ಹೆಸರನ್ನಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು. ಅಧ್ಯಾಯವನ್ನು ನೋಡಿ |