Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:6 - ಕನ್ನಡ ಸತ್ಯವೇದವು J.V. (BSI)

6 ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ಉಪೇಕ್ಷಿಸಿ ರೆಚೀನನನ್ನೂ ರೆಮಲ್ಯನ ಮಗನನ್ನೂ ನಂಬಿ ಮೆರೆದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಒಡೆಯನು ಹೀಗೆಂದನು: “ಈ ಜನರು ನಿಧಾನವಾಗಿ ಹರಿಯುವ ಸಿಲೋವ ಕೊಳದ ನೀರನ್ನು ಸ್ವೀಕರಿಸುವುದಿಲ್ಲ. ಇವರು ರೆಚೀನ್ ಮತ್ತು ರೆಮಲ್ಯನ ಮಗನೊಂದಿಗೆ ಸಂತೋಷದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:6
19 ತಿಳಿವುಗಳ ಹೋಲಿಕೆ  

ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.


ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವದೇ? ದೂರದಿಂದ ಇಳಿದು ಹರಿಯುವ ತೊರೆತದ ನೀರು ಬತ್ತುವದೇ?


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು?


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ ಒಳಗೆ ನುಗ್ಗಿಕೊಂಡು ಹೋಗಿ ಅದರಲ್ಲಿ ಟಾಬೇಲನ ಮಗನಿಗೆ ಪಟ್ಟಕಟ್ಟೋಣವೆಂದುಕೊಂಡದ್ದರಿಂದ


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವದಕ್ಕೋಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ


ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ಒಂದು ನದಿ ಅದೆ; ಅದರ ಕಾಲುವೆಗಳು ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ ದೇವನಗರವನ್ನು ಸಂತೋಷಪಡಿಸುತ್ತವೆ.


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು -


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು