Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:8 - ಕನ್ನಡ ಸತ್ಯವೇದವು J.V. (BSI)

8 ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:8
22 ತಿಳಿವುಗಳ ಹೋಲಿಕೆ  

ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆತನ ಶ್ವಾಸವು ತುಂಬಿತುಳುಕಿ ಕಂಠದ ಮಟ್ಟಿಗೂ ಏರುವ ತೊರೆ; ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವದಕ್ಕೆ ಬರುತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ಕಟಬಾಯಲ್ಲಿರುವದು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು;


ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.


ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ಬಾಬೆಲು ಜನಾಂಗಗಳ ಬೆರಗಿಗೆ ಈಡಾಗಿದೆ! ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನಪಟ್ಟಣಗಳ ಗತಿಗೆ ತಂದು ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವಾಗ


ಆಮೇಲೆ ಅವನ ಮಕ್ಕಳು ಯುದ್ಧಸನ್ನಾಹಮಾಡಿ ವ್ಯೂಹವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು; ಆ ಸೈನ್ಯವು ಮುಂದರಿದು ತುಂಬಿ ತುಳುಕಿ ಹಬ್ಬಿಕೊಳ್ಳುವದು; ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ಆತನೇ, [ನಮಗೆ] ಸಮಾಧಾನಪ್ರದನು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಅರಮನೆಗಳನ್ನು ತುಳಿದುಹಾಕುವಾಗ ನಾವು ಅವರಿಗೆ ವಿರುದ್ಧವಾಗಿ ಏಳು ಮಂದಿ ಪಾಲಕರನ್ನು, ಹೌದು, ಎಂಟು ಮಂದಿ ಪುರುಷಶ್ರೇಷ್ಠರನ್ನು ಏರ್ಪಡಿಸುವೆವು.


ಅಶ್ಶೂರದ ಅರಸನಾದ ಶಲ್ಮನೆಸೆರನು ಇವನಿಗೆ ವಿರೋಧವಾಗಿ ಬಂದಾಗ ಇವನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನ ಮಾಡಿಕೊಂಡನಂತರ ಯೆರೂಸಲೇಮನ್ನು ಸಮೀಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು