Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:15 - ಕನ್ನಡ ಸತ್ಯವೇದವು J.V. (BSI)

15 (ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:15
44 ತಿಳಿವುಗಳ ಹೋಲಿಕೆ  

ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.


ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮಶಾಸ್ತ್ರೋಪದೇಶದಲ್ಲಿ ಮುಖದಾಕ್ಷಿಣ್ಯವನ್ನು ತೋರಿಸಿದ್ದರಿಂದ ನಾನಂತು ನಿಮ್ಮನ್ನು ಎಲ್ಲಾ ಜನರ ಮುಂದೆ ಮಾನಗೆಟ್ಟವರನ್ನಾಗಿಯೂ ಕೀಳಾದವರನ್ನಾಗಿಯೂ ಮಾಡುವೆನು.


ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚುಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಯ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿರೋಧವು ಕಾದಿದೆ.


ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ


ಪ್ರವಾದಿಗಳ ವಿಷಯ. ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ಬಲಿಷ್ಟನಾದರೆ ದೇಶವೇ ಅವನದು, ಅಲ್ಲಿ ಸನ್ಮಾನಯೋಗ್ಯನಾಗಿ ವಾಸಿಸತಕ್ಕವನು ಅವನೇ.


ಮತ್ತು ಐಗುಪ್ತದಲ್ಲಿ ತಲೆಯಾಗಾಲಿ ಬಾಲವಾಗಲಿ, ತಾಳೆಯಾಗಲಿ ತೃಣವಾಗಲಿ, ಸಾಧಿಸಲು ಸಾಧ್ಯವಾದ ಯಾವ ಕೆಲಸವೂ ಇರುವದಿಲ್ಲ.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು