Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:17 - ಕನ್ನಡ ಸತ್ಯವೇದವು J.V. (BSI)

17 ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:17
33 ತಿಳಿವುಗಳ ಹೋಲಿಕೆ  

ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ; ಆಳಿನ ತೊಡೆಯ ಬಲವನ್ನು ಮೆಚ್ಚುವದಿಲ್ಲ.


ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು;


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಇವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು; ಇವರು ಗರ್ಭಫಲವನ್ನು ಕನಿಕರಿಸರು, ಇವರ ಕಣ್ಣು ಮಕ್ಕಳನ್ನೂ ಕರುಣಿಸದು.


ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!


ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.


ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟುಹಾಕುವದು.


ಅವನಿಗೆ ಕೃಪೆಮಾಡುತ್ತಿರುವವನೂ ಅವನ ದಿಕ್ಕಿಲ್ಲದ ಮಕ್ಕಳಿಗೆ ದಯೆತೋರಿಸುವವನೂ ಯಾವನೂ ಇಲ್ಲವಾಗಲಿ.


ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ.


ನೀನು ಆ ರಾಜರಂತೆ ಗೋರಿಗೆ ಸೇರುವದಿಲ್ಲ; ನಿನ್ನ ಪ್ರಜೆಯನ್ನು ಕೊಂದು ನಿನ್ನ ದೇಶವನ್ನು ಹಾಳುಮಾಡಿದ್ದೀ, ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಿರುವದಲ್ಲವೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.


ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಆ ದಿನದಲ್ಲಿ ಯುವಕರೂ ಸುಂದರಯುವತಿಯರೂ ಬಾಯಾರಿಕೆಯಿಂದ ಮೂರ್ಛೆ ಹೋಗುವರು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ; ನಿಮ್ಮ ಬುಸುಗುಟ್ಟುವಿಕೆಯು ನಿಮ್ಮನ್ನೇ ನುಂಗುವ ಜ್ವಾಲೆಯಾಗುವದು.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು; ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು