Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:18 - ಕನ್ನಡ ಸತ್ಯವೇದವು J.V. (BSI)

18 ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:18
36 ತಿಳಿವುಗಳ ಹೋಲಿಕೆ  

ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಕರ್ತನಾದ ಯೆಹೋವನು ಇನ್ನೊಂದನ್ನು ನನಗೆ ತೋರಿಸಿದನು - ಆಹಾ, ಕರ್ತನಾದ ಯೆಹೋವನು ತನ್ನ ಪಕ್ಷವಾಗಿ ವ್ಯಾಜ್ಯವಾಡುವದಕ್ಕೆ ಅಗ್ನಿಯನ್ನು ಕರೆದನು.


ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಪ್ರಕಾರವಾಗಿಯೂ ಬೇಗನೆ ಮಾಯವಾಗುವ ಇಬ್ಬನಿಯಂತೆಯೂ ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ ಗವಾಕ್ಷದಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು; ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವವು.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.


ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.


ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಸುಟ್ಟು ಹೋಗಿವೆ; ನಿಮ್ಮ ಭೂವಿುಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ; ಅನ್ಯದೇಶಗಳು ನಾಶನವಾದಂತೆಯೇ ನಿಮ್ಮ ಭೂವಿುಯೂ ಹಾಳಾಯಿತು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.


ಅದರ ಮುಂಗಡೆ ಬೆಂಕಿಯು ನುಂಗಿಕೊಂಡು ಬರುತ್ತದೆ, ಹಿಂಗಡೆ ಜ್ವಾಲೆಯು ಧಗಧಗಿಸುತ್ತದೆ; ಅದು ಬರುವದಕ್ಕೆ ಮುಂಚೆ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ದಾಟಿಹೋದ ಮೇಲೆ ಬೆಗ್ಗಾಡಾಗಿದೆ; ಅದಕ್ಕೆ ಯಾವದೂ ತಪ್ಪಿಸಿಕೊಳ್ಳಲಾರದು.


ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಎರಡು ಪಕ್ಷಗಳುಂಟಾದವು; ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು