ಯೆಶಾಯ 9:20 - ಕನ್ನಡ ಸತ್ಯವೇದವು J.V. (BSI)20 ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು [ತಿಂದರೂ] ಹಸಿದೇ ಇರುತ್ತಾರೆ; ಎಡಗಡೆಯಲ್ಲಿರುವದನ್ನು ಉಂಡರೂ ತೃಪ್ತಿಗೊಳ್ಳರು; ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿ |