ಯೆಶಾಯ 9:4 - ಕನ್ನಡ ಸತ್ಯವೇದವು J.V. (BSI)4 ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |