Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:5 - ಕನ್ನಡ ಸತ್ಯವೇದವು J.V. (BSI)

5 [ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:5
29 ತಿಳಿವುಗಳ ಹೋಲಿಕೆ  

ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಆಹಾ, ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,


ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಕರ್ತನ ಆಗಮನದ ಗಂಭೀರವಾದ ಮಹಾದಿನವು ಬರುವದಕ್ಕೆ ಮುಂಚೆ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂವಿುಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ, ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು;


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ


ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆದದರಿಂದ ಅವನು ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಯಾಜಕನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಮೂಲಕವಾಗಿ ಯೆಹೋವನಿಗೆ ಆಹಾರವಾಗುವದು.


ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು.


ಶತ್ರುವಿನ ತುರಗಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈಯವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು;


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಆಹಾ, ಬಹು ಜನಸಮೂಹವಿದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗಗಳ ಆರ್ಭಟ! ಸೇನಾಧೀಶ್ವರನಾದ ಯೆಹೋವನು ಸೈನ್ಯವನ್ನು ಯುದ್ಧಕ್ಕಾಗಿ ಅಣಿಮಾಡುತ್ತಿದ್ದಾನೆ.


ಗುಡ್ಡದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು.


ಯೆಹೋವನ ದೂತನು - ನನ್ನ ಹೆಸರನ್ನು ಕೇಳುವದೇಕೆ? ಅದು ಆಶ್ಚರ್ಯಕರವಾದದ್ದು ಅಂದನು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು