ಯೆಶಾಯ 9:6 - ಕನ್ನಡ ಸತ್ಯವೇದವು J.V. (BSI)6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು. ಅಧ್ಯಾಯವನ್ನು ನೋಡಿ |