Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:9 - ಕನ್ನಡ ಸತ್ಯವೇದವು J.V. (BSI)

9 ಇಟ್ಟಿಗೆಗಳು ಬಿದ್ದುಹೋದವು, ಹೋಗಲಿ, ಕೆತ್ತಿದ ಕಲ್ಲಿನಿಂದ ಕಟ್ಟುವೆವು; ಅತ್ತಿಮರಗಳು ಕಡಿಯಲ್ಪಟ್ಟವು, ಇರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇಟ್ಟಿಗೆಗಳು ಬಿದ್ದುಹೋಗಿವೆ. ಕೆತ್ತನೆ ಕಲ್ಲುಗಳಿಂದ ಮರಳಿ ಕಟ್ಟುವೆವು. ಕಡಿದಿರುವರು ಅತ್ತಿಮರಗಳನ್ನು, ಅಲ್ಲೇ ನೆಡುವೆವು ದೇವದಾರು ವೃಕ್ಷಗಳನ್ನು,” ಎಂದು ಗರ್ವದಿಂದ ಕೊಚ್ಚಿಕೊಳ್ಳುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮಾರ್ಯದ ನಾಯಕರೂ, ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು. ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗರ್ವದಿಂದಲೂ, ಹೆಮ್ಮೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯೀಮ್ಯರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಈ ಮಾತು ಗೊತ್ತಾಗುವುದು. ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:9
23 ತಿಳಿವುಗಳ ಹೋಲಿಕೆ  

ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ?


ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರ ಕೊಟ್ಟನು.


ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಕರ್ತನು ಯಾಕೋಬ್ಯರಿಗೆ ವಿರುದ್ಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರಿಗೆ ತಗಲಿತು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವದು.


ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು