Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:18 - ಕನ್ನಡ ಸತ್ಯವೇದವು J.V. (BSI)

18 ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲೂ ಅನೇಕಾನೇಕ ಮಿನುಗು ಕಣ್ಣುಗಳಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಚಕ್ರಗಳ ಅಂಚು ಎತ್ತರವಾಗಿದ್ದು ಭಯಾನಕವಾಗಿ ಕಾಣುತ್ತಿದ್ದವು. ಆ ನಾಲ್ಕು ಚಕ್ರಗಳ ಅಂಚುಗಳ ತುಂಬ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವುಗಳ ಚಕ್ರಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು. ಆ ನಾಲ್ಕು ಚಕ್ರಗಳ ಸುತ್ತಲೂ ಅನೇಕ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:18
10 ತಿಳಿವುಗಳ ಹೋಲಿಕೆ  

ಕೆರೂಬಿಗಳ ಬೆನ್ನು, ಕೈ, ರೆಕ್ಕೆ ಅಂತು ಸರ್ವಾಂಗಗಳಲ್ಲಿಯೂ ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.


ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?


ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು