Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:2 - ಕನ್ನಡ ಸತ್ಯವೇದವು J.V. (BSI)

2 (ಯೆಹೋಯಾಖೀನನು ಸೆರೆಯಾದ ಐದನೆಯ ವರುಷದ [ನಾಲ್ಕನೆಯ] ತಿಂಗಳಿನ ಐದನೆಯ ದಿನದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:2
9 ತಿಳಿವುಗಳ ಹೋಲಿಕೆ  

ನಾವು ಸೆರೆಯಾದ ಇಪ್ಪತ್ತೈದನೆಯ ವರುಷದ ಅಂದರೆ ಪಟ್ಟಣವು ಹಾಳಾದ ಹದಿನಾಲ್ಕನೆಯ ವರುಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ, ಹೌದು, ಆ ದಿನದಲ್ಲೇ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನ್ನನ್ನು ಅಲ್ಲಿಗೆ ಒಯ್ದನು.


[ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು.


[ಯೆಹೋಯಾಖೀನನು ಸೆರೆಯಾದ] ಇಪ್ಪತ್ತೇಳನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


[ಯೆಹೋಯಾಖೀನನು ಸೆರೆಯಾದ] ಆರನೆಯ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕೂತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


[ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ ಮೂರನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


[ಯೆಹೋಯಾಖೀನನು ಸೆರೆಯಾದ] ಹತ್ತನೆಯ ವರುಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು