ಯೆಹೆಜ್ಕೇಲನು 1:28 - ಕನ್ನಡ ಸತ್ಯವೇದವು J.V. (BSI)28 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಅಧ್ಯಾಯವನ್ನು ನೋಡಿ |