Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ ಯಾಜಕನೂ ಆದ ಯೆಹೆಜ್ಕೇಲನಿಗೆ ಸಾಕ್ಷಾತ್ತಾಗಿ ಒದಗಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:3
23 ತಿಳಿವುಗಳ ಹೋಲಿಕೆ  

ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ - ನೀನೆದ್ದು ಬೈಲುಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು ಎಂದು ಹೇಳಿದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ನಾವು ಸೆರೆಯಾದ ಇಪ್ಪತ್ತೈದನೆಯ ವರುಷದ ಅಂದರೆ ಪಟ್ಟಣವು ಹಾಳಾದ ಹದಿನಾಲ್ಕನೆಯ ವರುಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ, ಹೌದು, ಆ ದಿನದಲ್ಲೇ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನ್ನನ್ನು ಅಲ್ಲಿಗೆ ಒಯ್ದನು.


ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ತಗ್ಗಿನಲ್ಲಿ ಇಳಿಸಿ


ಅವನು ಬರುವದಕ್ಕೆ ಹಿಂದಿನ ಸಾಯಂಕಾಲ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಯೆಹೋವನು ಆ ಪಲಾಯಿತನು ಬೆಳಿಗ್ಗೆ ಬರುವನೆಂದು ನನ್ನ ಬಾಯನ್ನು ಬಿಚ್ಚಿದ್ದನು; ಹೌದು, ನನ್ನ ಬಾಯಿ ಬಿಚ್ಚಿತು, ನನ್ನ ಮೂಕತನವು ಹೋಯಿತು.


[ಯೆಹೋಯಾಖೀನನು ಸೆರೆಯಾದ] ಆರನೆಯ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕೂತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.


ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕೂತುಕೊಂಡು ಚೀಯೋನನ್ನು ನೆನಸಿ ಅತ್ತೆವು.


ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರ್ಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯ ದೇಶದ ಬಾಬೆಲಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು; ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನು ಕಂಡೆನು; ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತದರ್ಶನದಂಥಾ ದರ್ಶನವು ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆನು.


ಮೊದಲನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ ಮಹಾನದಿಯ ದಡದ ಮೇಲೆ ಇದ್ದು


(ನೀವೋ - ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ ಅಂದುಕೊಂಡಿದ್ದೀರಿ.)


ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು ಅವರು ಕೂತಿದ್ದ ಸ್ಥಳದಲ್ಲಿಯೇ ಕೂತುಕೊಂಡೆನು; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಇದ್ದುಬಿಟ್ಟೆನು.


ನಾನೆದ್ದು ಬೈಲುಸೀಮೆಗೆ ಹೊರಟುಹೋದಾಗ ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತದರ್ಶನವು ಆದಂತೆ ಆಹಾ, ಅಲ್ಲಿಯೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು