Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:4 - ಕನ್ನಡ ಸತ್ಯವೇದವು J.V. (BSI)

4 ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:4
35 ತಿಳಿವುಗಳ ಹೋಲಿಕೆ  

ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಸುತ್ತಿಕೊಂಡಿತ್ತು.


ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.


ಕಡಲಡವಿಯ ವಿಷಯವಾದ ದೈವೋಕ್ತಿ. ದಕ್ಷಿಣಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ [ದೊಡ್ಡ ಅವಾಂತರ] ಬರುತ್ತದೆ.


ಆತನ ಕಣ್ಣುಗಳು ಬೆಂಕಿಯ ಉರಿಯಂತೆಯೂ ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.


ಆದಕಾರಣ ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ - ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವದು;


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು; ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನು ಕಂಡೆನು; ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತದರ್ಶನದಂಥಾ ದರ್ಶನವು ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆನು.


ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.


ಝಗಝಗಿಸುವ ವಿುಂಚೂ ಅದರೊಂದಿಗಿತ್ತು. ಐಗುಪ್ತ್ಯರು ಜನಾಂಗವಾದಂದಿನಿಂದಲೂ ಆ ದೇಶದಲ್ಲಿ ಅಂಥ ಘೋರವಾದ ಕಲ್ಲಿನ ಮಳೆ ಆಗಿರಲಿಲ್ಲ.


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು