Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:7 - ಕನ್ನಡ ಸತ್ಯವೇದವು J.V. (BSI)

7 ಅವುಗಳ ಕಾಲುಗಳು ನೆಟ್ಟಗಿದ್ದು ಬೆಳಗಿದ ತಾಮ್ರದ ಹಾಗೆ ನಿಗಿನಿಗಿಸುತ್ತಿದ್ದವು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವುಗಳ ಕಾಲು ನೆಟ್ಟಗಿದ್ದವು; ಪಾದಗಳು ಕರುವಿನ ಗೊರಸಿನಂತೆ ಇದ್ದವು; ಬೆಳಗಿದ ಕಂಚಿನಂತೆ ಮಿನುಮಿನುಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಬೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳ ಕಾಲುಗಳು ನೆಟ್ಟಗಿದ್ದು, ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು, ಕಂಚಿಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:7
7 ತಿಳಿವುಗಳ ಹೋಲಿಕೆ  

ಆತನ ಕಣ್ಣುಗಳು ಬೆಂಕಿಯ ಉರಿಯಂತೆಯೂ ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು.


ಆ ಜೀವಿಗಳ ಮಧ್ಯದಲ್ಲಿ ಅದ್ಭುತ ಕಾಂತಿಯು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ, ವಿುಂಚುಗಳು, ಹೊರಡುತ್ತಿದ್ದವು.


ಗಾಳಿಗಳನ್ನು ನಿನ್ನ ದೂತರನ್ನಾಗಿಯೂ ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ಇದರಿಂದ ಶುದ್ಧಾಶುದ್ಧಗಳನ್ನೂ ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವದಕ್ಕೆ ನಿಮ್ಮಿಂದಾಗುವದು.


ಯಾವವಂದರೆ - ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಆತನು ನನ್ನನ್ನು ಅಲ್ಲಿಗೆ ತರಲು ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೇಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು