Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:1 - ಕನ್ನಡ ಸತ್ಯವೇದವು J.V. (BSI)

1 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:1
27 ತಿಳಿವುಗಳ ಹೋಲಿಕೆ  

ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ನನ್ನ ಕೋವರದಲ್ಲಿ ನಿಂತುಕೊಳ್ಳುವೆನು, ಬುರುಜಿನ ಮೇಲೆ ನೆಲೆಯಾಗಿರುವೆನು, ಯೆಹೋವನು ನನಗೆ ಏನು ಹೇಳುವನೋ, ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರಕೊಡಬೇಕೋ ಎಂದು ಎದುರು ನೋಡುವೆನು [ಅಂದುಕೊಂಡೆನು].


ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲಸಿತ್ತು.


ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿಯಬಂತು.


ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಬಹುದಿನಗಳ ಮೇಲೆ ಯೆಹೋವನು ನನಗೆ - ಹೊರಡು, ಯೂಫ್ರೇಟೀಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ ಎಂದು ಹೇಳಿದನು.


ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಬಂದನು.


ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.


ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಅವನು - ಇಗೋ, ಸ್ವಾವಿುಯ ಸಂಗಡ ಮಾತಾಡುವದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಇಪ್ಪತ್ತು ಮಂದಿಯಿದ್ದರೆ ಅವರ ನಿವಿುತ್ತ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.


ಆ ಮನುಷ್ಯರು ಅಲ್ಲಿಂದ ಸೊದೋವಿುನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನ ಎದುರಾಗಿ ಇನ್ನೂ ನಿಂತನು.


ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ?


ಹೇಗಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನ ಎದುರಿನಲ್ಲಿ ಯಾರೋ ಮೂರು ಮಂದಿ ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವದಕ್ಕೆ ಅವನು ಗುಡಾರದ ಬಾಗಲಿನಿಂದ ಓಡಿ ಹೋಗಿ


ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.


ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ ಎಂದು ಅರಿಕೆಮಾಡಿದನು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು