Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:19 - ಕನ್ನಡ ಸತ್ಯವೇದವು J.V. (BSI)

19 ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಮೂಡಣಬಾಗಿಲ ಮುಂದೆ ನಿಂತವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನೋಡುವಾಗಲೇ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿಕೊಂಡು, ಭೂಮಿಯನ್ನು ಬಿಟ್ಟು ಮೇಲಕ್ಕೇರಿ ಹೋದರು. ಅವು ಹೊರಟಾಗ, ಚಕ್ರಗಳೂ ಅದರ ಸಂಗಡ ಇದ್ದವು. ಅವರು ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಇಸ್ರಾಯೇಲಿನ ದೇವರ ಮಹಿಮೆಯು ಅವರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:19
9 ತಿಳಿವುಗಳ ಹೋಲಿಕೆ  

ಆಗ ಯೆಹೋವನ ತೇಜಸ್ಸು ಮೂಡಣ ಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ನಾನು ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನದೊಡೆಯರನ್ನು ನೋಡಿದೆನು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು.


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ಆಮೇಲೆ ಆತನು ನನ್ನನ್ನು ಮೂಡಣ ಬಾಗಿಲಿಗೆ ಬರಮಾಡಿದಾಗ


ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು