Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:3 - ಕನ್ನಡ ಸತ್ಯವೇದವು J.V. (BSI)

3 ಅವನು ಸೇರಿದಾಗ ಕೆರೂಬಿಗಳು ದೇವಾಲಯದ ತೆಂಕಲಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:3
7 ತಿಳಿವುಗಳ ಹೋಲಿಕೆ  

ಆಗ ಯೆಹೋವನ ತೇಜಸ್ಸು ಮೂಡಣ ಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಯೆಹೋವನು ಕೂಗಿ ಅವನಿಗೆ -


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು