Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:6 - ಕನ್ನಡ ಸತ್ಯವೇದವು J.V. (BSI)

6 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ ಎಂದು ಅಪ್ಪಣೆಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ” ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನ್ನು ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ, “ಚಕ್ರಗಳ ಮಧ್ಯದಿಂದಲೂ, ಕೆರೂಬಿಯರ ಮಧ್ಯದಿಂದಲೂ ಬೆಂಕಿಯನ್ನು ತೆಗೆದುಕೊಳ್ಳಲು,” ಆಜ್ಞಾಪಿಸಿದನು. ಮನುಷ್ಯನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:6
6 ತಿಳಿವುಗಳ ಹೋಲಿಕೆ  

ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಕೆರೂಬಿಯ ಕೆಳಗೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿತಂದು ಪಟ್ಟಣದ ಮೇಲೆ ಎರಚು ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೆ ಹೋಗಿ ಅಲ್ಲಿ ಪ್ರವೇಶಿಸಿದನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.


ಆಗ ಒಂದು ಕೆರೂಬಿಯು ಕೆರೂಬಿಗಳ ನಡುವೆ ಕೈಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.


ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು, ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು; ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು