Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:9 - ಕನ್ನಡ ಸತ್ಯವೇದವು J.V. (BSI)

9 ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಗೋ, ಆ ಕೆರೂಬಿಗಳ ಪಕ್ಕಗಳಲ್ಲಿ ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದುದು ಕಾಣಿಸಿತು. ಆ ಚಕ್ರಗಳ ಬಣ್ಣ ಪೀತರತ್ನದ ಹಾಗೆ ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನೋಡಿದಾಗ, ಇಗೋ ಒಬ್ಬೊಬ್ಬ ಕೆರೂಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು. ಆ ಚಕ್ರಗಳ ವರ್ಣವು ಹೊಳೆಯುವ ಪೀತರತ್ನದ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:9
6 ತಿಳಿವುಗಳ ಹೋಲಿಕೆ  

ನಾಲ್ಕನೇದು ಪದ್ಮರಾಗ, ಐದನೇದು ಗೋಮೇಧಿಕ, ಆರನೇದು ಮಾಣಿಕ್ಯ, ಏಳನೇದು ಪೀತರತ್ನ, ಎಂಟನೇದು ಬೆರುಲ್ಲ, ಒಂಭತ್ತನೇದು ಪುಷ್ಯರಾಗ, ಹತ್ತನೇದು ಗರುಡಪಚ್ಚೆ, ಹನ್ನೊಂದನೇದು ಇಂದ್ರನೀಲ, ಹನ್ನೆರಡನೇದು ನೀಲಸ್ಫಟಿಕ.


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು.


(ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.)


ಅವುಗಳ ರೂಪವು ಹೇಗಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು [ಅಡ್ಡವಾಗಿ] ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.


ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣಚಿತ್ರಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು