Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ನಾನು ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನದೊಡೆಯರನ್ನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಆತ್ಮವು ನನ್ನನ್ನು ಯೆಹೋವನಾಲಯದ ಪೂರ್ವದ ಬಾಗಿಲಿಗೆ ಕೊಂಡೊಯ್ಯಿತು. ಬಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನ್ನು ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನ್ನು, ಬೆನಾಯನ ಮಗನಾದ ಪೆಲತ್ಯನನ್ನು ನಾನು ನೋಡಿದೆನು. ಅವರಿಬ್ಬರು ಜನರಿಗೆ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:1
23 ತಿಳಿವುಗಳ ಹೋಲಿಕೆ  

ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡು - ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ ಎಂದು ಮೊರೆಯಿಟ್ಟೆನು.


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ ಮಹಿಮೆಯಿಂದ ಕೂಡಿದ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಭರಭರನೆ ಕೇಳಿಸಿತು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.


ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.


ಆಮೇಲೆ ಅವನು ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಆರಾರು ಮೊಳ, ದ್ವಾರದ ಅಗಲ ಹತ್ತು ಮೊಳ,


ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ತಗ್ಗಿನಲ್ಲಿ ಇಳಿಸಿ


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಮೂಡಣಬಾಗಿಲ ಮುಂದೆ ನಿಂತವು,


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


[ತಪ್ಪಿಸಿಕೊಂಡು ಉಳಿದಿದ್ದ] ಯೆಹೂದ ಸೇನಾಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇವಿುಸಲ್ಪಟ್ಟನೆಂಬ ವರ್ತಮಾನವನ್ನು ಕೇಳಿ ತಮ್ಮ ಜನರೊಡನೆ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. ಅವರು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.


ಅನಂತರ ಅವರು ಅವನಿಗೆ - ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ; ನಿನ್ನ ಯಜಮಾನನನ್ನು ಹುಡುಕಹೋಗುವದಕ್ಕೆ ಅವರಿಗೆ ಅಪ್ಪಣೆಯಾಗಲಿ. ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು ಎಂದು ಹೇಳಿದರು; ಅವನು ಅವರಿಗೆ - ನೀವು ಕಳುಹಿಸಬೇಡಿರಿ ಅಂದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.


ಆಮೇಲೆ ಅವನು ಮೂಡಣ ಹೆಬ್ಬಾಗಿಲಿಗೆ ಬಂದು ಮೆಟ್ಲುಗಳನ್ನು ಹತ್ತಿ ಹೊಸ್ತಲಿನ ಅಗಲವನ್ನು ಒಂದು ಕೋಲಳೆದನು. ಒಂದೊಂದು ಹೊಸ್ತಲಿನ ಅಗಲವು ಒಂದೊಂದು ಕೋಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು