Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:10 - ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:10
15 ತಿಳಿವುಗಳ ಹೋಲಿಕೆ  

ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವನ ಮಕ್ಕಳನ್ನು ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು;


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಾನು ನಿಮ್ಮ ಮುಸುಕುಗಳನ್ನೂ ಹರಿದು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು