ಯೆಹೆಜ್ಕೇಲನು 11:16 - ಕನ್ನಡ ಸತ್ಯವೇದವು J.V. (BSI)16 ಆದಕಾರಣ ನೀನು ಹೀಗೆ ಸಾರು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ದೂರವಾಗಿ ತೊಲಗಿಸಿ ಜನಾಂಗಗಳಲ್ಲಿ ಅನ್ಯದೇಶಗಳೊಳಗೆ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’ ಅಧ್ಯಾಯವನ್ನು ನೋಡಿ |