ಯೆಹೆಜ್ಕೇಲನು 11:17 - ಕನ್ನಡ ಸತ್ಯವೇದವು J.V. (BSI)17 ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’ ಅಧ್ಯಾಯವನ್ನು ನೋಡಿ |