Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:5 - ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶಿಸಲು ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:5
33 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆತನು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮವು ನನ್ನೊಳಗೆ ಸೇರಿ ನಾನು ಎದ್ದುನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆನು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


[ಯೆಹೋಯಾಖೀನನು ಸೆರೆಯಾದ] ಆರನೆಯ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕೂತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ದೇವರಾತ್ಮವು ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು - ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಲ್ಲ, ಪ್ರತ್ಯಕ್ಷದಲ್ಲೇ ಇದೆ.


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವದನ್ನು ಕಂಡನು. ದೇವರ ಆತ್ಮವು ಅವನ ಮೇಲೆ ಬಂದದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಆಗ ಯೆಹೋವನ ಆತ್ಮವು ನಿನ್ನ ಮೇಲೂ ಬರುವದರಿಂದ ನೀನೂ ಮಾರ್ಪಟ್ಟು ಪ್ರವಾದಿಸುವಿ.


ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.


ನಾನು ಮಾತಾಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮ ವರವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.


ಪೇತ್ರನು ಈ ಮಾತುಗಳನ್ನು ಇನ್ನೂ ಹೇಳುತ್ತಿರುವಾಗ ಅವನ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮವರವು ಇಳಿಯಿತು.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ?


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.


ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು