Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:10 - ಕನ್ನಡ ಸತ್ಯವೇದವು J.V. (BSI)

10 ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಈ ಹೊರೆಯು ಯೆರೂಸಲೇವಿುನಲ್ಲಿರುವ ಪ್ರಭುವಿಗೂ ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನು ಅವರಿಗೆ ಹೀಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಈ ಹೊರೆ ಜೆರುಸಲೇಮಿನಲ್ಲಿರುವ ರಾಜನಿಗೂ ಅಲ್ಲಿನ ಇಸ್ರಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರ ಒಡೆಯನಾದ ಯೆಹೋವನು ಇದನ್ನೆಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಈ ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರೆಲ್ಲರ ಕುರಿತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಅವರಿಗೆ ನೀನು ಹೀಗೆ ಹೇಳಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ಈ ಪ್ರವಾದನೆಯು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ, ಅದರಲ್ಲಿರುವ ಸಮಸ್ತ ಇಸ್ರಾಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:10
12 ತಿಳಿವುಗಳ ಹೋಲಿಕೆ  

ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ - ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿವಸ ನಾವಿಬ್ಬರೂ ಕುದುರೆಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ ಯೆಹೋವನು ಅಹಾಬನಿಗೆ -


ಯೆಹೋವನು ಇಸ್ರಾಯೇಲನ್ನು ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.


ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು.


ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಅರಸನಾದ ಆಹಾಜನು ಕಾಲವಾದ ವರುಷದಲ್ಲಿ ಈ ದೈವೋಕ್ತಿಯು ಕೇಳ ಬಂತು -


ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.


ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಸ್ಥಳದಲ್ಲಿ, ನಿನ್ನ ಜನ್ಮಭೂವಿುಯಲ್ಲಿ ನಿನಗೆ ನ್ಯಾಯತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು