Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:20 - ಕನ್ನಡ ಸತ್ಯವೇದವು J.V. (BSI)

20 ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಜನ ತುಂಬಿದ ಊರುಗಳು ಹಾಳಾಗಿ ನಾಡು ಪಾಳುಬೀಳುವುದು; ನಾನೇ ಸರ್ವೇಶ್ವರ ಎಂದು ನಿಮಗೆ ಆಗ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:20
23 ತಿಳಿವುಗಳ ಹೋಲಿಕೆ  

ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.


ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿವಿುತ್ತವೇ ಪ್ರಸನ್ನಮುಖದಿಂದ ನೋಡು.


ಅವರು ದ್ರೋಹಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವನವೃಕ್ಷಗಳಲ್ಲಿ ದ್ರಾಕ್ಷೆಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಕೊಟ್ಟಿದ್ದೇನೋ ಹಾಗೆಯೇ ನಾನು ಯೆರೂಸಲೇವಿುನವರನ್ನು [ನಾಶನಕ್ಕೆ] ಕೊಟ್ಟಿದ್ದೇನೆ.


ಇದರಿಂದ ನಮ್ಮ ಹೃದಯವು ಕುಂದಿದೆ, ಇದರಿಂದ ನಮ್ಮ ಕಣ್ಣು ಮೊಬ್ಬಾಗಿದೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗಂದಿದ್ದಾನೆ - ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.


ಪಟ್ಟಣದಲ್ಲಿ ಹಾಳೇ ಉಳಿದಿದೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.


ಭೂವಿುಯು ಬಟ್ಟಬರಿದಾಗುವದು, ಲೋಕಕ್ಕೆ ಸಂಪೂರ್ಣ ಸುಲಿಗೆಯಾಗುವದು; ಯೆಹೋವನೇ ಇದನ್ನು ನುಡಿದಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು.


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದೀರಲ್ಲಾ! ಹರಟೆಗಾರರ ಬಾಯಿಗೆ ಬಿದ್ದು ಜನರ ದೂಷಣೆಗೆ ಗುರಿಯಾಗಿದ್ದೀರಲ್ಲಾ!


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿನೋಡುವದಿಲ್ಲ.


ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು