Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:27 - ಕನ್ನಡ ಸತ್ಯವೇದವು J.V. (BSI)

27 ನರಪುತ್ರನೇ, ಇಗೋ ಇಸ್ರಾಯೇಲ್‍ವಂಶದವರು - ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನರಪುತ್ರನೇ, ಇಗೋ, ಇಸ್ರಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನ ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಬಹಳ ಕಾಲದ ನಂತರ ಅದು ನೆರವೇರುವುದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:27
8 ತಿಳಿವುಗಳ ಹೋಲಿಕೆ  

ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು.


ನರಪುತ್ರನೇ, ಕ್ಲುಪ್ತಕಾಲವು ದೂರದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಏನು?


ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಆದಕಾರಣ ನೀನು ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವದು ಖಂಡಿತ; ಇದು ಕರ್ತನಾದ ಯೆಹೋವನ ನುಡಿ.


ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ; ಆದರೆ ಆ ಕನಸು ಗುಟ್ಟಾಗಿರಲಿ; ಅದು ಬಹು ದೂರದ ಕಾಲದ್ದು ಎಂದು ಹೇಳಿದನು.


ಆಹಾ, ಆ ಮುಖಂಡರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ, ಅನ್ಯಾಯದ ಪೀಠವನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು