ಯೆಹೆಜ್ಕೇಲನು 12:3 - ಕನ್ನಡ ಸತ್ಯವೇದವು J.V. (BSI)3 ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ನರಪುತ್ರನೇ, ನಿನ್ನ ಚೀಲಗಳನ್ನು ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವುದನ್ನು ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನ್ನ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದುವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿ |