Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:7 - ಕನ್ನಡ ಸತ್ಯವೇದವು J.V. (BSI)

7 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಈಚೆಗೆ ಹಾಕಿ ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ ಅವರ ಕಣ್ಣಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆ: ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಮನೆಯೊಳಗಿನಿಂದ ಆಚೆಗೆ ಹಾಕಿದೆ; ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ, ಕತ್ತಲಲ್ಲಿ ಆ ಸಾಮಗ್ರಿಗಳನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನ್ನು ತಂದು ಹೊರಗಿಟ್ಟೆನು. ಸಾಯಂಕಾಲ ನನ್ನ ಕೈಗಳಿಂದ ಗೋಡೆಯಲ್ಲಿ ರಂಧ್ರ ಮಾಡಿ, ರಾತ್ರಿಕಾಲದಲ್ಲಿ ಆ ಚೀಲಗಳನ್ನು ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನ್ನನ್ನು ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:7
12 ತಿಳಿವುಗಳ ಹೋಲಿಕೆ  

ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರಣೆ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದೆನು.


ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು, ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು.


ನನಗೆ ಅಪ್ಪಣೆಯಾದಂತೆ ನಾನು ಆ ದೈವೋಕ್ತಿಯನ್ನೆತ್ತಿ ನುಡಿಯುತ್ತಿರಲು ಸದ್ದಾಯಿತು, ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ ಜೋಡನೆಯಾದವು.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಶಿಷ್ಯರು ಹೊರಟು ಪಟ್ಟಣಕ್ಕೆ ಹೋಗಿ ಆತನು ತಮಗೆ ಹೇಳಿದಂತೆ ಕಂಡು ಪಸ್ಕಕ್ಕೆ ಸೌರಿಸಿದರು.


ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.


ಇದಲ್ಲದೆ ಆತನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಿರಬೇಡ; ನಾನು ಕೊಡುವದನ್ನು ಬಾಯಿತೆರೆದು ತಿಂದುಬಿಡು ಅಂದನು.


ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು