Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:12 - ಕನ್ನಡ ಸತ್ಯವೇದವು J.V. (BSI)

12 ಇಗೋ, ಗೋಡೆಯು ಬಿದ್ದ ಮೇಲೆ ನೀವು ಬಳಿದ ಸುಣ್ಣ ಎಲ್ಲಿ ಎಂದು ನಿಮ್ಮನ್ನು ಕೇಳುವರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’” ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:12
11 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.


ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು.


ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.


ಆಗ ಜೆಬುಲನು ಅವನಿಗೆ - ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ ಎಂದು ಹೇಳಿದನು.


ಯೆಹೋವನು ಅವರ ವಿಷಯದಲ್ಲಿ ಹೇಳುವದೇನಂದರೆ - ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಶರಣನು ಎಲ್ಲಿದ್ದಾನೆ?


ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು.


ಆದಕಾರಣ ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ - ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವದು;


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು