Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:15 - ಕನ್ನಡ ಸತ್ಯವೇದವು J.V. (BSI)

15 ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:15
8 ತಿಳಿವುಗಳ ಹೋಲಿಕೆ  

ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು.


ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು ಅವನು ಬಾಗಿದ ಗೋಡೆಯೋ ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವದು ಇನ್ನೆಷ್ಟರವರೆಗೆ?


ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು.


ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು.


ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ.


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಇಸ್ರಾಯೇಲಿನ ಪ್ರವಾದಿಗಳೇ, ಕ್ಷೇಮವಿಲ್ಲದಿದ್ದರೂ ಕ್ಷೇಮವಾಗುವದೆಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇವಿುನ ವಿಷಯವಾಗಿ ಪ್ರವಾದಿಸಿದ್ದೀರಲ್ಲಾ; ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು. ಇದು ಕರ್ತನಾದ ಯೆಹೋವನ ನುಡಿ.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು - ಖಡ್ಗದಿಂದಲೂ ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು ಎಂದು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು