Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:18 - ಕನ್ನಡ ಸತ್ಯವೇದವು J.V. (BSI)

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ ಉದ್ದವಾದವರಿಗೂ ಗಿಡ್ಡಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:18
11 ತಿಳಿವುಗಳ ಹೋಲಿಕೆ  

ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಗಳನ್ನು ನಾನು ಬಿಡಿಸಿಬಿಡುವೆನು.


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ಇಸ್ರಾಯೇಲಿನ ಪ್ರವಾದಿಗಳೇ, ಕ್ಷೇಮವಿಲ್ಲದಿದ್ದರೂ ಕ್ಷೇಮವಾಗುವದೆಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇವಿುನ ವಿಷಯವಾಗಿ ಪ್ರವಾದಿಸಿದ್ದೀರಲ್ಲಾ; ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು. ಇದು ಕರ್ತನಾದ ಯೆಹೋವನ ನುಡಿ.


ಕ್ಷೇಮವಿಲ್ಲದಿದ್ದರೂ ಅವರು ಕ್ಷೇಮ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರಲ್ಲಾ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೆ, ಇಗೋ, ಅದಕ್ಕೆ ಸುಣ್ಣ ಬಳಿಯುತ್ತಾರೆ;


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ನಾನು ನಿಮ್ಮ ಮುಸುಕುಗಳನ್ನೂ ಹರಿದು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು