Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:2 - ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಬೇಕೆಂದು ಇಷ್ಟಪಡುತ್ತಾರೋ ಅದನ್ನೇ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:2
35 ತಿಳಿವುಗಳ ಹೋಲಿಕೆ  

ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಕಣಿಹೇಳುವ ನಿನ್ನ ಸ್ವಕುಲಸ್ತ್ರೀಯರ ಕಡೆಗೆ ಮುಖಮಾಡಿಕೊಂಡು ಅವರಿಗೆ ಖಂಡನೆಯಾಗಿ ಹೀಗೆ ಪ್ರವಾದಿಸು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಅಲ್ಲಿನ ಪ್ರವಾದಿಗಳು ಇವರಿಗಾಗಿ ವಿುಥ್ಯಾದರ್ಶನವನ್ನೂ ಸುಳ್ಳು ಕಣಿಯನ್ನೂ ಕಂಡು ಯೆಹೋವನು ಮಾತಾಡದಿದ್ದರೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು;


ಆದಕಾರಣ, ಕುರುಬರೇ ಯೆಹೋವನ ಮಾತನ್ನು ಕೇಳಿರಿ -


ಕುರುಬರೇ, ಯೆಹೋವನ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಇಂತೆನ್ನುತ್ತಾನೆ -


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯು ಏನೆಂದು ಹೇಳಲಿ!


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ.


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆದಕಾರಣ ಯೆರೂಸಲೇವಿುನ ಈ ಜನರನ್ನಾಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಹೀಗಿರಲು, ಸೂಳೆಯೇ, ಯೆಹೋವನ ಈ ವಾಕ್ಯವನ್ನು ಕೇಳು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು